ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022
ಟ್ರಾಕ್ಟರ್ ಟ್ರೈಲರ್’ಗೆ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿಯ ಪೆಟ್ರೋಲ್ ಬಂಕ್ ಮುಂಭಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ರೇಣು (42) ಎಂಬುವವರು ಮೃತಪಟ್ಟಿದ್ದಾರೆ.
ಹೇಗಾಯ್ತು ಅಪಘಾತ?
ಶಿವಮೊಗ್ಗದ ಚಿಕ್ಕಲ್’ನ ರೇಣು ಅವರು ಗುರುಪುರದ ಶಿವಕುಮಾರ್ ಅವರೊಂದಿಗೆ ಜನವರಿ 28ರಂದು ಮೈದೊಳಲು ಗ್ರಾಮದಲ್ಲಿ ಪೇಂಟಿಂಗ್ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಸಂಜೆ ಬೈಕ್’ನಲ್ಲೇ ಮನೆಗೆ ಹಿಂತಿರುಗುತ್ತಿದ್ದರು.
ಶಿವಕುಮಾರ್ ಅವರು ಬೈಕ್ ಚಾಲನೆ ಮಾಡುತ್ತಿದ್ದರು. ಹೊಳೆಬೆನವಳ್ಳಿ ಪೆಟ್ರೋಲ್ ಬಂಕ್ ಬಳಿ ಬರುತ್ತಿದ್ದಾಗ, ಪೆಟ್ರೋಲ್ ಬಂಕ್’ನಿಂದ ದಿಢೀರನೆ ಟ್ರಾಕ್ಟರ್ ಒಂದು ರಸ್ತೆಗೆ ಬಂದಿದೆ. ಈ ಸಂದರ್ಭ ಬೈಕು ಟ್ರಾಕ್ಟರ್’ನ ಟ್ರೇಲರ್’ಗೆ ಡಿಕ್ಕಿಯಾಗಿದೆ.
ಗಾಯಾಗಳುಗಳನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ರೇಣು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ನಿರ್ಲಕ್ಷ್ಯದ ಚಾಲನೆಗೆ ಕಾರಣವಾದ ಟ್ರಾಕ್ಟರ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೇಣು ಅವರ ಕುಟುಂಬದವರು ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತ ತಡೆಗೆ ಚಾರ್ಟ್ ಸಿದ್ಧ, ಪೊಲೀಸ್ ಇಲಾಖೆಯಿಂದ ರೆಡಿಯಾಗ್ತಿದೆ ಪ್ಲಾನ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422