ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಆಟೋ ಕಾರು ಮುಖಾಮುಖಿ ಡಿಕ್ಕಿ

 ಶಿವಮೊಗ್ಗ  LIVE 

SHIVAMOGGA LIVE NEWS | 6 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಆಟೋ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆಟೋದಲ್ಲಿದ್ದ ತಾಯಿ ಮತ್ತು ಮಗನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಪಿಳ್ಳಂಗೆರೆಯ ಫಜಲು ರೆಹಮಾನ್ ಮತ್ತು ಅವರ ತಾಯಿ ಆಸಿಯಾಬಿ ಗಾಯಗೊಂಡಿದ್ದಾರೆ.

ಫಜಲು ರೆಹಮಾನ್ ಅವರು ತಮ್ಮ ಆಟೋದಲ್ಲಿ ತಾಯಿಯನ್ನು ಕೂರಿಸಿಕೊಂಡು ಶುಕ್ರವಾರ ರಾತ್ರಿ ಶಿವಮೊಗ್ಗದಿಂದ ಪಿಳ್ಳಂಗೆರೆಗೆ ತೆರಳುತ್ತಿದ್ದರು. ಪಿಳ್ಳಂಗೆರೆ ಸಮೀಪ ಚೌಡೇಶ್ವರಿ ದೇವಸ್ಥಾನದ ಬಳಿ ಎದುರಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಆಟೋದಲ್ಲಿದ್ದ ತಾಯಿ, ಮಗ ಇಬ್ಬರೂ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment