ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020
ಲಾರಿ, ಎಲೆಕ್ಟ್ರಿಕಲ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‍ನಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ.

ಹೇಗಾಯ್ತು ಅಪಘಾತ?
ಸವಳಂಗ ರಸ್ತೆಯಿಂದ ವಿನೋಬನಗರ ನೂರು ಅಡಿ ರಸ್ತೆಗೆ ತಿರುಗುತ್ತಿದ್ದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ನಾಗರಾಜ್ (83) ಅವರು ಕೆಳಗೆ ಬಿದ್ದಿದ್ದು, ಅವರ ಕಾಲಿನ ಮೇಲೆ ಲಾರಿ ಹತ್ತಿತ್ತು ಎಂದು ಹೇಳಲಾಗುತ್ತಿದೆ. ಗಾಯಗೊಂಡಿದ್ದ ನಾಗರಾಜ್ ಅವರನ್ನು ಕೂಡಲೆ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಬೈಕ್ ನುಜ್ಜುಗುಜ್ಜು
ನಾಗರಾಜ್ ಅವರು ಚಲಿಸುತ್ತಿದ್ದ ಬೈಕ್, ಲಾರಿ ಅಡಿಗೆ ಸಿಲುಕಿ ನುಜ್ಜುಗುಜ್ಜಾಗಿತ್ತು. ಇದು ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





