ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 17 ಜನವರಿ 2020
ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿದೆ. ಬೈಕ್ ಸವಾರ ನಾಗರಾಜ್ (24) ಗಂಭೀರವಾಗಿ ಗಾಯಗೊಂಡಿದ್ದು, ಮೃತರಾಗಿದ್ದಾರೆ. ಹರೀಶ್, ರವಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಪಲ್ಟಿ, ಬೈಕು ನುಜ್ಜುಗುಜ್ಜು
ರೈಲ್ವೆ ನಿಲ್ದಾಣದ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಕೆ.ಆರ್.ಪುರಂ ನಿವಾಸಿ ನಾಗರಾಜ್, ಬೆಂಗಳೂರಿನಿಂದ ಬಂದಿದ್ದ ತನ್ನ ಸ್ನೇಹಿತರನ್ನು ರೈಲ್ವೆ ನಿಲ್ದಾಣದಿಂದ ಕರೆ ಕರೆತರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಬೈಕ್’ಗೆ ಗುದ್ದಿದ ಕಾರು ಪಲ್ಟಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಬೈಕ್ ಕೂಡ ಜಖಂ ಆಗಿದೆ. ಇದು ಅಪಘಾತದ ಭೀಕರತೆಯನ್ನು ಸಾರುತ್ತಿದೆ.
ಪೊಲೀಸ್ ಚೌಕಿಯು ಜಖಂ
ಮಹಾವೀರ ಸರ್ಕಲ್’ನಲ್ಲಿರುವ ಪೊಲೀಸ್ ಚೌಕಿಯು ಅಪಘಾತದಲ್ಲಿ ಜಖಂ ಆಗಿದೆ. ಚೌಕಿಗೆ ಗುದ್ದಿ ಕಾರು ಪಲ್ಟಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422