ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 4 ಜನವರಿ 2020
ನಿದಿಗೆ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ.
ಹೇಗಾಯ್ತು ಘಟನೆ?
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಬಳಿ ಕೆಟ್ಟು ನಿಂತಿದ್ದ ಲಾರಿಗೆ, ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಚಾಲಕ ಎಲ್.ಜಿ.ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಮುಂಬಾಗ ನುಜ್ಜುಗುಜ್ಜಾಗಿದೆ.
ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದರು
ಗಂಗಾಧರ್ ಅವರು ವಕೀಲರಾಗಿದ್ದು, ಶಿವಮೊಗ್ಗದಲ್ಲಿ ನಡೆದ ವಕೀಲ ದಿನಾಚರಣೆಯ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಭದ್ರಾವತಿಯ ಕನಕನಗರದಲ್ಲಿ ಗಂಗಾಧರ್ ಅವರ ಮನೆ ಇದೆ. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತಕ್ಕೆ ಕಾರಣವೇನು?
ನಿದಿಗೆ ಬಳಿ ಲಾರಿಯೊಂದು ನಡು ರಸ್ತೆಯಲ್ಲೇ ಕೆಟ್ಟು ನಿಂತಿತ್ತು. ರಸ್ತೆ ಡಿವೈಡರ್ ಪಕ್ಕದಲೇ ಲಾರಿ ನಿಂತಿದ್ದು ಅಪಘಾತಕ್ಕೆ ಪ್ರಮುಖ ಕಾರಣ. ಇನ್ನು ರಾತ್ರಿ ವೇಳೆ ಇಬ್ಬನಿ ಹೆಚ್ಚಿತ್ತು. ಹಾಗಾಗಿ ನಡು ರಸ್ತೆಯಲ್ಲಿ ನಿಂತಿದ್ದ ಲಾರಿ ಕಾಣಿಸದೆ ಅಪಘಾತ ಸಂಭವಿಸಿರುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಕೀಲ ಗಂಗಾಧರ್ ನಿಧನಕ್ಕೆ ವಕೀಲರು ಸಂತಾಪ ಸೂಚಿಸಿದ್ದಾರೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಶಿವಮೊಗ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A car met with an accident in Shimoga Nidige. Car Collided with a truck , where an advocate died in the spot. Shimoga Police visited the spot.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422