ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SAGARA NEWS | 29 ಡಿಸೆಂಬರ್ 2021
ಲಾರಿ ಮತ್ತು ಅಶೋಕ ಲೇಲ್ಯಾಂಡ್ ಮಿನಿ ವಾಹನದ ಮದ್ಯೆ ಭೀಕರ ಅಪಘಾತ ಸಂಭವಿಸಿದೆ. ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.
ಸಾಗರ ತಾಲೂಕು ಆನಂದಪುರದ ಕಣ್ಣೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಲಾರಿ, ಮಿನಿ ವಾಹನದ ಮಧ್ಯೆ ರಾತ್ರಿ ಡಿಕ್ಕಿಯಾಗಿದೆ. ಓರ್ವ ಸಾವನ್ನಪ್ಪಿದ್ದು, ಚಾಲಕನಿಗೆ ಗಂಭೀರ ಗಾಯವಾಗಿದೆ.
ಮೃತನು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್ ಮಿನಿ ವಾಹನವು ಶುಂಠಿ ತುಂಬಿಕೊಂಡು ಕುಂದಾಪುರದ ಕಡೆಗೆ ತೆರಳುತ್ತಿತ್ತು.
ಸ್ಥಳೀಯರ ನೆರವಿನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422