ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2021
ಬೊಲೆರೊ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಶಿವಮೊಗ್ಗ – ಆಯನೂರು ನಡುವೆ ಮುದ್ದಿನಕೊಪ್ಪ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೊಲೆರೊ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಚಂದ್ರಶೇಖರ್ ಎಂಬಾತನಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಒಂದಕ್ಕೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಚಂದ್ರಶೇಖರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬೈಕ್ ಸವಾರ ಪೆರುಮಾಳ್’ಗೆ ಗಂಭೀರ ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ಬಳಿಕ ಬೊಲೆರೊ ಪಿಕಪ್ ವಾಹನ ರಸ್ತೆ ಪಕ್ಕಕ್ಕೆ ಉರುಳಿದೆ. ಬೊಲೆರೊದಲ್ಲಿದ್ದವರಿಗು ಗಾಯವಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422