ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JULY 2023
ANANDAPURA : ಭೂ ವಿವಾದ ಸಂಬಂಧ ಸಿನಿಮಾ ನಟಿ (Actress) ಮತ್ತು ಆಕೆಯ ತಂದೆಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಟಿ ಚಿಕಿತ್ಸೆ ಪಡೆದಿದ್ದಾರೆ.

ನಟಿ ಅನಿತಾ ಗೌಡ ಮತ್ತು ಆಕೆಯ ತಂದೆ ಶ್ರೀನಿವಾಸ ಗೌಡ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಏನಿದು ಪ್ರಕರಣ?
ಸಾಗರ ತಾಲೂಕು ಕಾಸ್ಪಾಡಿ ಗ್ರಾಮದ ಸರ್ವೇ ನಂಬರ್ 43ರ ಜಮೀನು ಸಂಬಂಧ ಶ್ರೀನಿವಾಸ ಗೌಡ ಮತ್ತು ಮೋಹನ್ ಎಂಬವವರಿಗೆ ವಿವಾದವಿದೆ. ಜೂ.30ರಂದು ನಟಿ ಅನಿತಾ ಗೌಡ ಮತ್ತು ಶ್ರೀನಿವಾಸ ಗೌಡ ಅವರು ಜಮೀನಿನಲ್ಲಿ ಕೆಲಸ ಮಾಡುವಾಗ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಅನಿತಾ ಗೌಡ ಕನ್ನಡ ಮತ್ತು ತಮಿಳು ಭಾಷೆಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ (Actress). ಹುಡುಗರು, ಕೆಂಪೇಗೌಡ, ದಂಡಂ ದಶಗುಣಂ, ಬೃಂದಾವನ ಸೇರಿದಂತೆ ಕನ್ನಡ ಸಿನಿಮಾಗಳಲ್ಲಿ ಪಾತ್ರ ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು, ಯಾರದು ಆರೋಪಿ? ಗುಂಡು ಹಾರಿಸಿದ್ದೇಕೆ?
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





