ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOLEHONNURU NEWS, 24 OCTOBER 2024 : ತೋಟಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಡಿಕೆ (Adike) ಕೊಯ್ದು ಟ್ರಾಕ್ಟರ್ನಲ್ಲಿ ಕೊಂಡೊಯ್ಯುತ್ತಿದ್ದಾಗ ತಡೆದ ಮಾಲೀಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ಈಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟ್ರಾಕ್ಟರ್ ಮತ್ತು ಬೈಕುಗಳಲ್ಲಿ ಬಂದವರು ತೋಟದಲ್ಲಿ ಸುಮಾರು 20 ರಿಂದ 25 ಕ್ವಿಂಟಾಲ್ ಅಡಿಕೆ ಕೊಯ್ದು ತುಂಬಿಕೊಂಡು ಹೋಗುತ್ತಿದ್ದರು. ಇದನ್ನು ತಡೆಯಲು ಮುಂದಾದ ಈಶ್ವರಪ್ಪ ಮತ್ತು ಅವರ ಮಗನಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಒಂಭತ್ತು ಮಂದಿ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಅಡಿಕೆ ಧಾರಣೆ | 24 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?