ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2024
SHIMOGA : ದೆಹಲಿ ಮತ್ತು ಅಹಮದಾಬಾದ್‌ಗೆ ಲಾರಿಯಲ್ಲಿ ಕಳುಹಿಸಿದ್ದ ಅಡಿಕೆ ಪೈಕಿ 10 ಕ್ವಿಂಟಾಲ್ ಅಡಿಕೆ ಕಳುವಾಗಿದೆ (THEFT). ಈ ಸಂಬಂಧ ಲಾರಿ ಚಾಲಕರ ವಿರುದ್ಧವೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ.9ರಂದು ಅಹಮದಾಬಾದ್‌ಗೆ 24,500 ಕೆ.ಜಿ ಅಡಿಕೆ ಕಳುಹಿಸಲಾಗಿತ್ತು. ಏ.18ರಂದು ದೆಹಲಿಗೆ 24,500 ಕೆ.ಜಿ ಅಡಿಕೆ ರವಾನಿಸಲಾಗಿತ್ತು. ಆದರೆ ದೆಹಲಿ ಮತ್ತು ಅಹಮದಾಬಾದ್‌ನ ಅಡಿಕೆ ವ್ಯಾಪಾರಿಗಳು ತೂಕ ಕಡಿಮೆಯಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಟ್ರಾನ್ಸ್‌ಪೋರ್ಟ್ ಮ್ಯಾನೇಜರ್ ಎರಡು ಲಾರಿಗಳ ಚಾಲಕರ ವಿಚಾರಣೆ ಮಾಡಿದಾಗ ಅಡಿಕೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 16 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?
ಲಾರಿ ಚಾಲಕರು ಪ್ರತಿ ಚೀಲದಿಂದ ಒಂದೆರಡು ಕೆ.ಜಿಯಷ್ಟು ಅಡಿಕೆ ಕಳ್ಳತನ ಮಾಡಿ, ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಟ್ರಾನ್ಸ್‌ಪೋರ್ಟ್ ಮ್ಯಾನೇಜರ್ ಶೇಕ್ ಉಮರ್ ಫಾರೂಕ್ ದೂರಿನಲ್ಲಿ ಆರೋಪಿಸಿದ್ದಾರೆ. ಅಂದಾಜು 2.50 ಲಕ್ಷ ರೂ. ಮೌಲ್ಯದ 10 ಕ್ವಿಂಟಾಲ್ ಅಡಿಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















