ಶಿವಮೊಗ್ಗ: ಉಚಿತ ಆಫರ್ ಸಿಮ್ ಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಕಾರ್ಡ್ ಪಡೆದು ಸೈಬರ್ ವಂಚಕರಿಗೆ ನೀಡಿದ್ದ ಆರೋಪದ ಮೇಲೆ ಶಿವಮೊಗ್ಗದ ವ್ಯಕ್ತಿಯೊಬ್ಬನ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮಹಿಳೆಯೊಬ್ಬರಿಗೆ ಮೊಬೈಕ್ ಸಿಮ್ ಕಾರ್ಡ್ ಏಜೆಂಟ್ ಒಬ್ಬಾತ ಆಫರ್ ಸಿಮ್ ಕೊಡಿಸುವುದಾಗಿ ನಂಬಿಸಿದ್ದ. ಮಹಿಳೆಯ ಭಾವಚಿತ್ರ ಹಾಗೂ ಗುರುತಿನ ಚೀಟಿಯ ಮಾಹಿತಿ ಪಡೆದುಕೊಂಡಿದ್ದ. ಬಳಿಕ ನಿಮ್ಮ ಹೆಸರಿನಲ್ಲಿ ಸಿಮ್ ದೊರೆಯುವುದಿಲ್ಲ ಎಂದು ತಿಳಿಸಿದ್ದ. ಅನುಮಾನಗೊಂಡ ಮಹಿಳೆ ಸಂಚಾರ್ ಸಾಥಿ ಪೋರ್ಟಲ್ ಹಾಗೂ ಏರ್ಟೆಲ್ ಕಂಪನಿಯಲ್ಲಿ ಪರಿಶೀಲಿಸಿದಾಗ, ಅವರ ದಾಖಲೆಗಳನ್ನು ದುರುಪಯೋಗ ಮಾಡಿಕೊಂಡು ಸಿಮ್ ಪಡೆದು ಸೈಬರ್ ವಂಚಕರಿಗೆ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ವೈಯಕ್ತಿಕ ಮಾಹಿತಿ ಹಾಗೂ ದಾಖಲೆಗಳನ್ನು ಪಡೆದು ಅಕ್ರಮವಾಗಿ ಸಿಮ್ ಕಾರ್ಡ್ ಪಡೆದುಕೊಂಡು ಸೈಬರ್ ಅಪರಾಧಗಳಿಗೆ ಬಳಸುವ ಇಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಸಾರ್ವಜನಿಕರು ಸಂಚಾರ್ ಸಾಥಿ ಪೋರ್ಟಲ್ ಬಳಸಿ ತಮ್ಮ ಹೆಸರಿನಲ್ಲಿ ಎಷ್ಟು ಸಿಮ್ಗಳಿವೆ ಎಂದು ಖಚಿತಪಡಿಸಿಕೊಳ್ಳಬೇಕಿದೆ.