ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 MAY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
TARIKERE : ಚಲಿಸುತ್ತಿದ್ದ ಐರಾವತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಸೆಮಿ ಸ್ಲೀಪರ್ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ. ಬಸ್ಸು ಭಾಗಶಃ ಸುಟ್ಟು ಹೋಗಿದೆ.
ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್ ಬಳಿ ರಾತ್ರಿ 1.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೆ ಬಸ್ಸು ಭಾಗಶಃ ಸುಟ್ಟು ಹೋಗಿತ್ತು.
ಇದನ್ನೂ ಓದಿ – ಐರಾವತ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ಟಿಸಿ
ಐರಾವತ ಬಸ್ಸು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಚಾಲಕ, ನಿರ್ವಾಹಕ ಸೇರಿ ಒಟ್ಟು 40 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ತರಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. (Airavata semi sleeper)
ಇದನ್ನೂ ಓದಿ – ಬಡ್ಡಿ ದಂಧೆಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ