ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವತಿಗೆ (rescue a girl) ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗದ ಅಕ್ಕ ಪಡೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸೋಮವಾರ ಅಕ್ಕ ಪಡೆಯ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭ ಯುವತಿಯೊಬ್ಬಳು ಅಳುತ್ತಾ ನಿಂತಿದ್ದರು. ಕೂಡಲೇ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ, ವ್ಯಕ್ತಿಯೊಬ್ಬನು ತನಗೆ ಉಪಟಳ ನೀಡುತ್ತಿರುವ ಬಗ್ಗೆ ಆಕೆ ಮಾಹಿತಿ ನೀಡಿದ್ದರು.

ಕಾರ್ಯಪ್ರವೃತ್ತರಾದ ಅಕ್ಕ ಪಡೆ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಅಲ್ಲಿ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿ, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





