ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 15 DECEMBER 2024
ಶಿವಮೊಗ್ಗ : ಹಿಂದೂ ಹರ್ಷ ಹತ್ಯ ಪ್ರಕರಣದ ಸಾಕ್ಷಿದಾರರೊಬ್ಬರಿಗೆ (Evidence) ಕೋರ್ಟ್‌ಗೆ ತೆರಳದಂತೆ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಾಕ್ಷಿಯಾಗಿ ಪರಿಗಣಿಸಿತ್ತು. ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ.
ಏನಿದು ಪ್ರಕರಣ? ಆಗಿದ್ದೇನು?
ಹಿಂದೂ ಹರ್ಷ ಹತ್ಯೆಯಾದ ದಿನ ಆರೋಪಿಗಳು ಶಿವಮೊಗ್ಗದ ಪೆಟ್ರೋಲ್ ಬಂಕ್‌ನಲ್ಲಿ ತಮ್ಮ ಕಾರಿಗೆ ಇಂಧನ ಭರ್ತಿ ಮಾಡಿಸಿಕೊಂಡಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಭರ್ತಿ ಮಾಡಿದ್ದ. ಈ ಹಿನ್ನೆಲೆ ಆತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು. ಸದ್ಯ ಆ ಯುವಕ ಪೆಟ್ರೋಲ್ ಬಂಕ್ ತೊರೆದು ಬೇರೆ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?
ಈಚೆಗೆ ಆ ಪೆಟ್ರೋಲ್ ಬಂಕ್‌ಗೆ ಸ್ಕೂಟಿಯಲ್ಲಿ ತೆರಳಿದ್ದ ವ್ಯಕ್ತಿಯೊಬ್ಬ ಆ ಯುವಕ ಯಾರು ಎಂದು ವಿಚಾರಿಸಿದ್ದ. ಆತ ಕೆಲಸ ಬಿಟ್ಟಿರುವುದಾಗಿ ತಿಳಿಸಿದಾಗ, ‘ಕೋರ್ಟ್‌ಗೆ ಹೋಗುವುದು ಬೇಡ ಎಂದು ಹೇಳಿ’ ಎಂದು ಬಂಕ್ ಸಿಬ್ಬಂದಿಗೆ ತಿಳಿಸಿ ಹೋಗಿದ್ದ ಎಂದು ಆರೋಪಿಸಲಾಗಿದೆ. ಈ ವಿಷಯ ಸ್ನೇಹಿತರಿಂದ ಯುವಕನಿಗೆ ಗೊತ್ತಾಗಿದೆ.
ಇದನ್ನೂ ಓದಿ » ತುಂಗಾ ನದಿಯಲ್ಲಿ ಸ್ನಾನ ಮುಗಿಸಿ ದಂಡೆಗೆ ಬಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗೆ ಕಾದಿತ್ತು ಶಾಕ್
ಡಿ.12ರಂದು ಎನ್‌ಐಎ ನ್ಯಾಯಾಲಯದಲ್ಲಿ ಯುವಕ ಸಾಕ್ಷಿ ನುಡಿದಿದ್ದಾರೆ. ಮರುದಿನ ಕೋರ್ಟ್ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422