HOLEHONNURU, 8 SEPTEMBER 2024 : ಗಣಪತಿ ವಿಸರ್ಜನ ಪೂರ್ವ ಮೆರವಣಿಗೆ (Procession) ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಸೇರಿದ ಹಲವರು ಗಾಯಗೊಂಡಿದ್ದಾರೆ.
ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ಘಟನೆಗೆ ಕಾರಣವೇನು?
ಅರಬಿಳಚಿ ಕ್ಯಾಂಪ್‌ನಲ್ಲಿ ಎರಡು ಸಂಘಟನೆಯವರು ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಒಂದೇ ಡೊಳ್ಳು ತಂಡವನು ಗೊತ್ತು ಮಾಡದ್ದರು. ಒಂದು ಗಣಪತಿ ಪೆಂಡಾಲ್ ಮುಂಭಾಗ ಡೊಳ್ಳು ಬಾರಿಸುತ್ತಿದ್ದ ಸಂದರ್ಭ ಮತ್ತೊಂದು ಸಂಘಟನೆಯವರು ತಮ್ಮ ಪೆಂಡಾಲ್ ಬಳಿ ಬಂದು ಡೊಳ್ಳು ಬಾರಿಸುವಂತೆ ಆಗ್ರಹಿಸಿದರು. ಇದರಿಂದ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಸಂದರ್ಭ ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ, ಭದ್ರಾವತಿ ಡಿವೈಎಸ್‌ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್‌ಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿರುವ ಎಲ್ಲ ಗಣಪತಿ ಮೂರ್ತಿಗಳನ್ನು ಇಂದೇ ವಿಸರ್ಜನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೆಲಸಕ್ಕೆ ಸೇರಿದ ಎರಡನೇ ದಿನ ತಿಂಡಿಗೆ ಹೋದವನು ವಾಪಸಾಗಲಿಲ್ಲ, ಆಮೇಲೆ ಮಾಲೀಕನಿಗೆ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200