ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOLEHONNURU, 8 SEPTEMBER 2024 : ಗಣಪತಿ ವಿಸರ್ಜನ ಪೂರ್ವ ಮೆರವಣಿಗೆ (Procession) ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಸೇರಿದ ಹಲವರು ಗಾಯಗೊಂಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅರಬಿಳಚಿ ಕ್ಯಾಂಪ್‌ನಲ್ಲಿ ಎರಡು ಸಂಘಟನೆಯವರು ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಒಂದೇ ಡೊಳ್ಳು ತಂಡವನು ಗೊತ್ತು ಮಾಡದ್ದರು. ಒಂದು ಗಣಪತಿ ಪೆಂಡಾಲ್ ಮುಂಭಾಗ ಡೊಳ್ಳು ಬಾರಿಸುತ್ತಿದ್ದ ಸಂದರ್ಭ ಮತ್ತೊಂದು ಸಂಘಟನೆಯವರು ತಮ್ಮ ಪೆಂಡಾಲ್ ಬಳಿ ಬಂದು ಡೊಳ್ಳು ಬಾರಿಸುವಂತೆ ಆಗ್ರಹಿಸಿದರು. ಇದರಿಂದ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.ಘಟನೆಗೆ ಕಾರಣವೇನು?
ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಸಂದರ್ಭ ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ, ಭದ್ರಾವತಿ ಡಿವೈಎಸ್‌ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್‌ಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿರುವ ಎಲ್ಲ ಗಣಪತಿ ಮೂರ್ತಿಗಳನ್ನು ಇಂದೇ ವಿಸರ್ಜನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೆಲಸಕ್ಕೆ ಸೇರಿದ ಎರಡನೇ ದಿನ ತಿಂಡಿಗೆ ಹೋದವನು ವಾಪಸಾಗಲಿಲ್ಲ, ಆಮೇಲೆ ಮಾಲೀಕನಿಗೆ ಕಾದಿತ್ತು ಆಘಾತ