SHIMOGA NEWS, 10 OCTOBER 2024 : ಕಸದ (Trash) ವಿಚಾರವಾಗಿ ಅಕ್ಕಪಕ್ಕದ ಮನೆಯವರು ಕೈ ಕೈ ಮಿಲಾಯಿಸಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಘಟನೆ ನಡೆದಿದೆ. ಮಹಿಳೆಯೊಬ್ಬರು (ಹೆಸರು ಗೌಪ್ಯ) ಬೆಳಗ್ಗೆ ಇದನ್ನು ಗಮನಸಿದ ಪಕ್ಕದ ಮನೆಯ ಮಹಿಳೆ (ಹೆಸರು ಗೌಪ್ಯ) ಪ್ರಶ್ನೆ ಮಾಡಿದ್ದಾರೆ. ಆಗ ಜಗಳವಾಗಿ ಪಕ್ಕದ ಮನೆಯ ಮಹಿಳೆ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮನೆ ಮುಂಭಾಗ ಕಸ ಗುಡಿಸುವಾಗ ತಮ್ಮ ಮನೆ ಕಡೆಯ ಕಸವನ್ನು ಪಕ್ಕದ ಮನೆಯತ್ತ ತಳ್ಳಿದ್ದಾರೆ ಎಂದು ಅರೋಪಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ | ಮಳೆಗೆ ಕೊಚ್ಚಿ ಹೋದ ಹಳಿ ಕೆಳಗಿನ ಜೆಲ್ಲಿ, ರೈಲುಗಳ ಸಂಚಾರ ವಿಳಂಬ
ಯತಿ ವಿರುದ್ಧ ಶಿವಮೊಗ್ಗದಲ್ಲಿ ಕೇಸ್
ಶಿವಮೊಗ್ಗ ಲೈವ್.ಕಾಂ : ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಉತ್ತರ ಪ್ರದೇಶದ ಯತಿ ನರಸಿಂಹಾನಂದ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಯತಿ ನರಸಿಂಹಾನಂದ ಎಂಬುವವರು ರಾವಣ ಮತ್ತು ಮೇಘನಾದನ ಪ್ರತಿಕೃತಿ ಬದಲು ಮೊಹಮ್ಮದನ ಪ್ರತಿಕೃತಿ ದಹಿಸಿ ಎಂದು ಹೇಳಿಕೆ ನೀಡಿದ್ದರು. ಇದು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಈ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಕೋಮು ಸೌರ್ಹಾದತೆ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಜಮಾತ್ ಉಲೇಮಾದ ಅಧ್ಯಕ್ಷ ಫಜ್ಲುರ್ ರೆಹಮಾನ್ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ | ಬೈಕ್‌ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ
ಮೆಗ್ಗಾನ್ ಆಸ್ಪತ್ರೆಯಲ್ಲಿ ಬೈಕ್ ಕಳವು
ಶಿವಮೊಗ್ಗ ಲೈವ್.ಕಾಂ : ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಹೊಳೆಹೊನ್ನೂರು ಸಮೀಪದ ಮೂಡಲವಿಠಲಪುರದ ದೇವಪ್ಪ ಅವರು ಸ್ಪ್ಲೆಂಡರ್ ಬೈಕ್‌ನಲ್ಲಿ ಆಸ್ಪತ್ರೆಗೆ ಬಂದಿದ್ದರು. ತಮ್ಮ ಸಹೋದರನ ಪತ್ನಿಯ ಆರೋಗ್ಯ ವಿಚಾರಿಸಲು ಒಳಗೆ ಹೋಗಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ
ಮಾರಕಾಸ್ತ್ರ ಸಹಿತ ಆರೋಪಿ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ : ಮಾರಕಾಸ್ತ್ರ ತೋರಿಸಿ ಜನರಲ್ಲಿ ಆತಂಕ ಮೂಡಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 14 ಇಂಚ್ ಉದ್ದದ ಚಾಕು ವಶಕ್ಕೆ ಪಡೆಯಲಾಗಿದೆ. ಆನಂದರಾವ್ ಬಡಾವಣೆಯ ಮಸೀದಿ ಹಿಂಭಾಗ ವಿಶ್ವನಾಥ್ ಎಂಬಾತ ಚಾಕು ಹಿಡಿದು ಜನರಿಗೆ ಪ್ರದರ್ಶಿಸುತ್ತಿದ್ದ. ಆತಂಕಗೊಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ದಾಳಿ ನಡೆಸಿದ ಪೊಲೀಸರು ವಿಶ್ವನಾಥನನ್ನು ಬಂಧಿಸಿದ್ದರು. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತ, ಸ್ಥಳಕ್ಕೆ ಸಂಸದ ಭೇಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200