ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JANUARY 2024
ನ್ಯೂ ಮಂಡ್ಲಿಯಲ್ಲಿ ವ್ಯಕ್ತಿಗೆ ಇಟ್ಟಿಗೆಯಿಂದ ಹಲ್ಲೆ
SHIMOGA : ನೀರಿನ ವಿಚಾರವಾಗಿ ನೆರಹೊರೆಯವರ ಮಧ್ಯೆ ಗಲಾಟೆಯಾಗಿದ್ದು ವ್ಯಕ್ತಿಯೊಬ್ಬನಿಗೆ ಇಟ್ಟಿಗೆಯಿಂದ ಹೊಡೆಯಲಾಗಿದೆ ಎಂದು ಆರೋಪಿಸಲಾಗಿದೆ. ನಗರದ ನ್ಯೂ ಮಂಡ್ಲಿಯಲ್ಲಿ ಘಟನೆ ಸಂಭವಿಸಿದೆ. ದಾದಾಪೀರ್ ಎಂಬುವವರ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಲಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಸಿದ್ದಾರೆ. ತಲೆ ಮತ್ತು ಕಣ್ಣಿನ ಭಾಗಕ್ಕೆ ಪೆಟ್ಟಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪಕ್ಕದ ಮನೆಯವರ ಜೊತೆ ನೀರು ಮತ್ತು ಮನೆ ಸಮೀಪ ಕೊಚ್ಚೆ ಮಾಡಲಾಗುತ್ತಿದೆ ಎಂಬ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಈ ಸಂಬಂಧ 6 ಮಂದಿ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಬೈಕ್ಗೆ ಮಾರುದ್ದದ ದಂಡದ ಬಿಲ್, ಆಟೋಗೆ ಚಾಲಕನಿಗು ಶಾಕ್, ಕಟ್ಟಿದ ಫೈನ್ ಎಷ್ಟು?
ಮೇಲಿನ ಕುಂಚೇನಹಳ್ಳಿಯಲ್ಲಿ ಆಂಬುಲೆನ್ಸ್ ಡಿಕ್ಕಿ
SHIMOGA : ಜಮೀನಿನಿಂದ ಸಂಜೆ ಹಿಂತಿರುಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಮೇಲಿನ ಕುಂಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ತೇಜ್ಯಾನಾಯ್ಕ (49) ಗಾಯಗೊಂಡವರು. ಮನೆಗೆ ತೆರಳುತ್ತಿದ್ದ ತೇಜ್ಯಾನಾಯ್ಕ ಅವರಿಗೆ ಶಿವಮೊಗ್ಗ ಕಡೆಯಿಂದ ವೇಗವಾಗಿ ತೆರಳುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೇಜ್ಯಾನಾಯ್ಕ ಅವರ ತಲೆಗೆ ಪೆಟ್ಟು ಬಿದ್ದಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಅಪಘಾತ, ರಸ್ತೆ ಪಕ್ಕದ ಗುಂಡಿಗಿಳಿದ ಖಾಸಗಿ ಬಸ್, ಹೇಗಾಯ್ತು ಘಟನೆ?
ಗಾಡಿಕೊಪ್ಪದಲ್ಲಿ ಬಾಲಕಿ ಸೇರಿ ಇಬ್ಬರಿಗೆ ಬೈಕ್ ಡಿಕ್ಕಿ
SHIMOGA : ರಸ್ತೆ ದಾಟುತ್ತಿದ್ದ ಬಾಲಕಿ ಮತ್ತು ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ನಗರದ ಗಾಡಿಕೊಪ್ಪ ಬಳಿ ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಮೀಪದ ಸರ್ಕಾರಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಸುಶ್ಮಿತಾ, ರಸ್ತೆಯ ಡಿವೈಡರ್ ದಾಟುತ್ತಿದ್ದ ಸಂದರ್ಭ ಅಪಾಚೆ ಬೈಕ್ ಡಿಕ್ಕಿ ಹೊಡೆದಿದೆ. ನಂತರ ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಶಿವರಾಜ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ವಿರುದ್ಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















