ಶಿವಮೊಗ್ಗ ಲೈವ್.ಕಾಂ | SHIMOGA | 08 ಡಿಸೆಂಬರ್ 2019
ಟ್ರಾಕ್ಟರ್ ಮತ್ತು ಆಂಬುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಆಂಬುಲೆನ್ಸ್’ನ ಒಂದು ಭಾಗ ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ 15 ದಿನದ ಹಸುಳೆ ಅದೃಷ್ಟವಶಾತ್ ಪಾರಾಗಿದೆ.
ಉಷಾ ನರ್ಸಿಂಗ್ ಹೋಂನ ಬಳಿ ರಾತ್ರಿ ಘಟನೆ ನಡೆದಿದೆ. ಆಂಬುಲೆನ್ಸ್ ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿತ್ತು. ಈ ವೇಳೆ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಟ್ರಾಕ್ಟರ್ ಡಿಕ್ಕಿಯಾಗಿದೆ.
ಶಿಕಾರಿಪುರ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಮಗುವಿಗೆ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆತರಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Ambulance and a tractor met with an accident near Usha Nursing Home circle. Traffic Police Visit the spot.