ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA CRIME NEWS | 18 ಅಕ್ಟೋಬರ್ 2020
ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಆನವಟ್ಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ ಒಂದು ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಡೆ ಗ್ರಾಮದ ಪವನ್ ಕುಮಾರ್ (19) ಮತ್ತು ಸಂಜಯ್ (20) ಬಂಧಿತರು. ಇವರ ಬಂಧನದಿಂದಾಗಿ ಮೂರು ಮನೆಗಳ್ಳತನ ಪ್ರಕರಣಗಳು ಬಯಲಾಗಿವೆ.
ಬಂಧಿತರಿಂದ 1.12 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ, 4 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ಪತ್ತೆಗಾಗಿ ಶಿಕಾರಿಪುರ ಉಪ ವಿಭಾಗ ಎಎಸ್‍ಪಿ ಶ್ರೀನಿವಾಸಲು, ಸೊರಬ ಸರ್ಕಲ್ ಇನ್ಸ್‍ಪೆಕ್ಟರ್ ಮರುಳಸಿದ್ದಪ್ಪ, ಪಿಎಸ್ಐ ಅರವಿಂದ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಕಳ್ಳರನ್ನು ಬಂಧಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]