ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020
ಲಾಕ್’ಡೌನ್ ಮತ್ತು ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಇದ್ದರು ಜೂಜಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ. ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಲ್ಲಿಗೇನಹಳ್ಳಿ ಶಕ್ತಿಧಾಮ ಲೇಔಟ್ ಒಳಗೆ ಅಂದರ್ ಬಾಹರ್ ಜೂಜಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.
ಶಕ್ತಿಧಾಮ ಲೇಔಟ್’ನ ಸಿದ್ದಪ್ಪ (50) ಮಲ್ಲಿಗೇನಹಳ್ಳಿ ಶ್ರೀನಿವಾಸ್ ಅಲಿಯಾಸ್ ಸೀನಪ್ಪ (36), ಗುರುರಾಜ್ (27), ಸತೀಶ್ (32), ಮಹಮ್ಮದ್ ಗೌಸ್ (54) ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 15,500 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]