SHIVAMOGGA LIVE | 18 JULY 2023
SAGARA : ಅಂಗಡಿಯೊಂದರ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ವೇಳೆ ಅಂಗನವಾಡಿಯಲ್ಲಿದ್ದ ಬೇಳೆ ಚೀಲ ಹರಿಯಲಾಗಿದೆ. ಮಕ್ಕಳಿಗೆ ಕೊಡಲು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಹಾಕಲಾಗಿದೆ.
ಸಾಗರ ಪಟ್ಟಣದ ಅರಳಿಕಟ್ಟೆ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಅಂಗನವಾಡಿಯಲ್ಲಿ ಭಾನುವಾರ ತಡರಾತ್ರಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಕಳ್ಳರು ಅಂಗನವಾಡಿ ಕೇಂದ್ರದಲ್ಲಿದ್ದ ಬೇಳೆ ಚೀಲವನ್ನು ಹರಿದು ಬೇಳೆಯನ್ನು ಚೆಲ್ಲಿದ್ದಾರೆ. ಮೊಟ್ಟೆಗಳ ಒಡೆದು ಹಾಕಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್, ಏನದು?
ಅಂಗನವಾಡಿ ಕಾರ್ಯಕರ್ತೆ ಬೆಳಗ್ಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಸದಸ್ಯ ಉಷಾ ಗುರುಮೂರ್ತಿ, ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200