ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಅಕ್ಟೋಬರ್ 2021
ಕಡಜದ ಹುಳುಗಳ ದಾಳಿಯಿಂದ ಕೆಲವು ದಿನದ ಹಿಂದೆ ಇಬ್ಬರು ಮೃತಪಟ್ಟಿದ್ದರು. ಈಗ ಮತ್ತೊಬ್ಬ ವ್ಯಕ್ತಿ ಕಡಜದ ಹುಳುಗಳ ದಾಳಿಯಿಂದ ಕೊನೆಯುಸಿರೆಳೆದಿದ್ದಾರೆ.
ಭದ್ರಾವತಿ ತಾಲೂಕು ಉಕ್ಕುಂದ ಗ್ರಾಮದ ಕೃಷಿ ಕೂಲಿ ಕಾರ್ಮಿಕ ಕುಮಾರ್ (38) ಮೃತ ದುರ್ದೈವಿ.
ಕೆಂಚಮ್ಮನಹಳ್ಳಿಯ ರಂಗಪ್ಪ ಎಂಬುವವರ ತೆಂಗಿನ ತೋಟದಲ್ಲಿ ಕಾಯಿ ಕೀಳುವ ಕೆಲಸ ಮಾಡುತ್ತಿದ್ದರು. ಈ ವೇಳೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥರಾಗಿದ್ದ ಕುಮಾರ್ ಅವರನ್ನು ಭದ್ರಾವತಿಯ ನರ್ಸಿಂಗ್ ಹೋಂಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ಕುಮಾರ್ ಮೃತಪಟ್ಟಿದ್ದಾರೆ. ಪತ್ನಿ, ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಕ್ಕಳನ್ನು ಇದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಇಬ್ಬರು ಸಾವು
ಈ ತಿಂಗಳ ಆರಂಭದಲ್ಲಿ ಕಡಜದ ಹುಳುಗಳ ದಾಳಿಗೆ ಭದ್ರಾವತಿ ತಾಲೂಕು ಇಬ್ಬರು ಮೃತಪಟ್ಟಿದ್ದಾರೆ. ಆನೆಕೊಪ್ಪದ ಎಂಪಿಎಂ ಬಡಾವಣೆ ಬಳಿ ಕಡಜದ ಹುಳುಗಳ ದಾಳಿಗೆ ಸಿ.ಎನ್.ನಂಜಪ್ಪ (50) ಮತ್ತು ಮಲ್ಲಿಕಾರ್ಜುನ್ (55) ಎಂಬುವವರು ಮೃತರಾಗಿದ್ದರು. ಟ್ರಾಕ್ಟರ್’ಗೆ ಕಟ್ಟಿದ್ದ ಕೋಲು ಕಡಜದ ಗೂಡಿಗೆ ತಾಗಿತ್ತು. ಇದರಿಂದ ಸಿಟ್ಟಿಗೆದ್ದ ಹುಳುಗಳು ದಾಳಿ ಮಾಡಿದ್ದವು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






