SHIVAMOGGA LIVE NEWS | 4 MARCH 2024
SHIMOGA : ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಕೇಸ್ ವರ್ಕರ್ ಯೋಗೇಶ್ ಎಂಬುವವರನ್ನು ಬಂಧಿಸಿದಾರೆ. 50 ಸಾವಿರ ರೂ. ಲಂಚದ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ?
ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ 14 ಮಳಿಗೆಗಳ ಮರು ಹಂಚಿಕೆಗೆ ಹೈಕೋರ್ಟ್ ಆದೇಶಿಸಿತ್ತು. ಈ ಸಂಬಂಧ ಎಪಿಎಂಸಿಯಿಂದ ಪ್ರಕಟಣೆ ಹೊರಡಿಸಲಾಗಿತ್ತು. ಗೋಪಾಳದ ನಿವಾಸಿ ರವೀಂದ್ರ ವೀರಭದ್ರಪ್ಪ ನೇರಳೆ ಎಂಬುವವರು ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಪಡೆಯಲು ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಅವರನ್ನು ಭೇಟಿಯಾಗಿದ್ದರು. ಆಗ ‘ಹೆಡ್ ಆಫೀಸ್‌ಗೆ ಹೋಗಿ ಸರಿ ಮಾಡಬೇಕು. ಇದಕ್ಕೆ ಖರ್ಚು ಬರಲಿದೆ. ಸ್ವಲ್ಪ ನೋಡಿಕೊಳ್ಳಿʼ ಎಂದು ಕಾರ್ಯದರ್ಶಿ ತಿಳಿಸಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಮಿಷನ್ ಏಜೆಂಟ್ ಲೈಸೆನ್ಸ್‌ನ ಕೇಸ್ ವರ್ಕರ್ ಯೋಗೇಶ್ ಎಂಬುವವರನ್ನು ಭೇಟಿಯಾಗುವಂತೆ ತಿಳಿಸಿದ್ದರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಎರಡು ಲಕ್ಷದಿಂದ ಒಂದು ಲಕ್ಷಕ್ಕೆ ಇಳಿಕೆ
ಕೇಸ್ ವರ್ಕರ್ ಯೋಗೇಶ್ 2 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಕೊನೆಗೆ ಒಂದು ಲಕ್ಷ ರೂ.ಗೆ ಒಪ್ಪಿಗೆ ನೀಡಿದ್ದ. ರವೀಂದ್ರ ನೇರಳೆ ಅವರು ಇವತ್ತು ಮುಂಗಡವಾಗಿ 50 ಸಾವಿರ ರೂ. ಹಣ ನೀಡಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಕೇಸ್ ವರ್ಕರ್ ಯೋಗೇಶ್‌ನನ್ನು ಅರೆಸ್ಟ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಇನ್‌ಸ್ಟಾಗ್ರಾಂನಲ್ಲಿ ಒಂದು ಕ್ಲಿಕ್ ಮಾಡಿದ ಶಿವಮೊಗ್ಗದ ಉದ್ಯಮಿಗೆ ಕಾದಿತ್ತು ಬಿಗ್ ಶಾಕ್, ಕಾರಣವೇನು?
ಲೋಕಾಯುಕ್ತ ಅಧೀಕ್ಷಕ ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಉಮೇಶ್ ಈಶ್ವರ ನಾಯ್ಕ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇನ್ಸ್‌ಪೆಕ್ಟರ್ ಪ್ರಕಾಶ್, ಸಿಬ್ಬಂದಿ ಮಹಾಂತೇಶ್, ಸುರೇಂದ್ರ, ಯೋಗೀಶ್, ಬಿ.ಟಿ.ಚನ್ನೇಶ, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ದೇವರಾಜ, ರಘುನಾಯ್ಕ, ಪುಟ್ಟಮ್ಮ, ಜಯಂತ, ವಿ.ಗೋಪಿ, ಪ್ರದೀಪ್ ಕುಮಾರ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.