ಶಿವಮೊಗ್ಗ: ನಗರದಲ್ಲಿ ಪೊಲೀಸರು ದಿಢೀರ್ ವಿಶೇಷ ಏರಿಯಾ ಡಾಮಿನೇಷನ್ ಕಾರ್ಯಾಚರಣೆ ನಡೆಸಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಆರ್ಎಂಎಲ್ ನಗರ, ಬುದ್ಧನಗರ, ಮಿಳಘಟ್ಟ ಭಾಗದಲ್ಲಿ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ನಡೆಸಲಾಯಿತು. ಈ ಸಂದರ್ಭ 24 ಮಂದಿಯನ್ನು ಠಾಣೆಗೆ ಕರೆಯಿಸಿ ವೈದ್ಯಕೀಯ ಪರೀಕ್ಷೆ ನಡೆಸಾಯಿತು. ಈ ಸಂದರ್ಭ ನಾಲ್ಕು ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಅವರ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ » ಆಟೋದಲ್ಲಿ ಬಂತು ಐದು ಬಾಳೆಗೊನೆ, ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್, ಆಗಿದ್ದೇನು?
ನಗರದಲ್ಲಿ ಇನ್ನಷ್ಟು ಕಡೆಗಳಲ್ಲಿ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಹೆಚ್ಚಿಸಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

