ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 4 ಸೆಪ್ಟೆಂಬರ್ 2021
ಒಂದೆಡೆ ಅಡಕೆ ಬೆಲೆ ಗಗನಮುಖಿಯಾಗುತ್ತಿದೆ. ಬೆಳಗಾರರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ಅಡಕೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾತ್ರೋರಾತ್ರಿ ತೋಟವೊಂದರಿಂದ ಅಡಕೆ ಕೊನೆಗಳನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಶಿಕಾರಿಪುರ ತಾಲೂಕು ಉಡುಗಣಿ ಹೋಬಳಿಯ ಕೊಡಿಕೊಪ್ಪ ಗ್ರಾಮದ ತೋಟವೊಂದರಲ್ಲಿ ಅಡಕೆ ಕೊನೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಜಯಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ರಾತ್ರಿ ಕಳ್ಳರು ಅಡಕೆ ಕೊನೆಗಳನ್ನು ಕೊಯ್ದುಕೊಂಡು ಹೋಗಿದ್ದಾರೆ. 68 ಮರಗಳಿಂದ ಕೊನೆ ಕಳವು ಮಾಡಲಾಗಿದೆ. 90 ಸಾವಿರ ಮೌಲ್ಯದ 15 ಕ್ವಿಂಟಾಲ್ ಹಸಿ ಅಡಕೆ ಕಳ್ಳತನವಾಗಿದೆ ಎಂದು ಜಯಪ್ಪ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200