ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಣದಲ್ಲಿ ಒಣಗಿಸಲು ಹಾಕಿದ್ದ 150 ಕೆ.ಜಿ ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಖದೀಮರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲಿನ ಬೇಡರ ಹೊಸಹಳ್ಳಿಯ ಸುಭಾಷ್ ಎಂಬುವವರ ತೋಟದಲ್ಲಿ ಕಳ್ಳತನವಾಗಿದೆ. ಅಡಕೆಯನ್ನು ಬೇಯಿಸಿ, ಕಣದಲ್ಲಿ ಒಣಗಿಸಲು ಹಾಕಲಾಗಿತ್ತು. ಜನವರಿ 5ರ ರಾತ್ರಿ ತೋಟದಲ್ಲಿ ಕಳ್ಳರು, 55 ಸಾವಿರ ಮೌಲ್ಯದ 150 ಕೆ.ಜಿ. ಅಡಕೆಯನ್ನು ಕಳ್ಳತನ ಮಾಡಿದ್ದಾರೆ. ಸುಭಾಷ್ ಅವರು ಬೆಳಗ್ಗೆ ಪರಿಶೀಲನೆ ನಡೆಸಿದಾಗ ಕಳ್ಳತನ ಬೆಳಕಿಗೆ ಬಂದಿದೆ.
ಎಲ್ಲೆಡೆ ವಿಚಾರಣೆ ನಡೆಸಿ ತಡವಾಗಿ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]