ಐದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌, ಜೈಲಿಗೆ

ಶಿವಮೊಗ್ಗ: ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ (absconding) ಆರೋಪಿಯನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ ಬೊಮ್ಮನಕಟ್ಟೆಯ ಹುಸೇನ್ ಪಾಶಾ (48) ಎಂಬಾತನ ವಿರುದ್ದ ಮೂರನೇ ಜೆಎಂಎಫ್ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಗ್ರಾಮಾಂತರ ಠಾಣೆ ಪಿಐ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿ ದಿವಾಕರ್, ವಿರೇಶ್ ಅವರ ತಂಡ ಆರೋಪಿಯನ್ನುವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನದಲ್ಲಿರಿಸಿ ಆದೇಶಿಸಿದೆ.

Shivamogga-Police-Jeep

ಇದನ್ನೂ ಓದಿ : ಆರು ವರ್ಷದ ಬಳಿಕ ಶಿವಮೊಗ್ಗದಲ್ಲಿ ವ್ಯಕ್ತಿ ಅರೆಸ್ಟ್‌, ಜೈಲುಪಾಲು, ಕಾರಣವೇನು?

Leave a Comment