ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಯುವತಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆಗೆದು ಅಶ್ಲೀಲ ಫೋಟೊಗಳನ್ನು ಅಪ್ಲೋಡ್ ಮಾಡಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲಕ ಖಾಸಗಿ ಕಂಪನಿಯೊಂದರ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಶ್ಲೀಲ ಫೋಟೊ ಅಪ್ಲೋಡ್ ಮಾಡಿ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವತಿಯು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖಾಸಗಿ ಕಂಪನಿ ಮಾಲೀಕ
ಚಿಕ್ಕಮಗಳೂರು ಜಿಲ್ಲೆಯ ಹಿರೆಮಗಳೂರು ಗ್ರಾಮದ ವೇಣುಗೋಪಾಲ್ (30) ಎಂಬಾತನನ್ನು ಬಂಧಿಸಲಾಗಿದೆ. ಈತ ಖಾಸಗಿ ಕಂಪನಿಯೊಂದರ ಮಾಲೀಕನಾಗಿದ್ದಾನೆ. ಈತನಿಂದ ನಾಲ್ಕು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ವೇಣುಗೋಪಾಲ್ ವಿರುದ್ಧ ಐಟಿ ಆಕ್ಟ್ನ ಸೆಕ್ಷನ್ 66(ಸಿ) 66(ಡಿ) 67ಐಟಿ ಆಕ್ಟ್ ಮತ್ತು ಐಪಿಸಿ ಸೆಕ್ಷನ್ 354(ಎ) 354(ಡಿ) ಅಡಿ ಪಕ್ರರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]