ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟೆಂಬರ್ 2021
ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ಯಾಂಕ್ ಮೊಹಲ್ಲಾದ 7ನೇ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಅನಿಲ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ.
ಹೇಗಾಯ್ತು ಘಟನೆ?
ದಾವಣಗೆರೆಯಲ್ಲಿ ಸ್ವ ಉದ್ಯೋಗ ಮಾಡುತ್ತಿರುವ ಅನಿಲ್, ತನ್ನ ಹೆಂಡತಿ, ಮಕ್ಕಳನ್ನು ನೋಡಲು ಶಿವಮೊಗ್ಗಕ್ಕೆ ಬಂದಿದ್ದರು. ಮಕ್ಕಳಿಗೆ ತಿಂಡಿ ತರಲು ತೆರಳಿದ್ದಾಗ ಅವರ ಮೇಲೆ ಐದಾರು ಜನರು ಹಲ್ಲೆ ನಡೆಸಿದ್ದಾರೆ.

ಮಚ್ಚು, ದೊಣ್ಣೆಗಳಿಂದ ಹಲ್ಲೆ ನಡೆಸಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ತಲೆ, ಹೊಟ್ಟೆ ಮತ್ತು ಮೈಕೈಗೆ ಹೊಡೆಯಲಾಗಿದೆ. ಘಟನೆಯಲ್ಲಿ ಅನಿಲ್ ಗಂಭೀರ ಗಾಯಗೊಂಡಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ದಾಳಿ ನಡೆಸಿರುವ ಬಗ್ಗೆ ದೂರಿನಲ್ಲಿ ಶಂಕೆ ವ್ಯಕ್ತವಾಗಿದೆ.
ದಾಳಿ ಹಿನ್ನೆಲೆ ಬೋಗ, ಕಿರಣ್, ಗೌತಮ್, ಅವಿ ಮತ್ತು ಇತರರ ವಿರುದ್ಧ ದೂರು ನೀಡಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














