ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ಕುಡಿಯಲು ಹಣ ಕೊಡುವಂತೆ ಕೇಳಿದ್ದಕ್ಕೆ ಸ್ನೇಹಿತರಿಬ್ಬರ ಮಧ್ಯೆ ಜಗಳವಾಗಿದ್ದು, ಒಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ತಿಕ್ (22) ಗಾಯಗೊಂಡಿದ್ದಾನೆ. ಈತನ ಸ್ನೇಹಿತ ಆನಂದ್ (25) ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಲಕ್ಷ್ಮೀ ಟಾಕೀಸ್ ಬಳಿ ಇರುವ ವೈನ್ ಶಾಪ್ ಒಂದರ ಮುಂದೆ ಘಟನೆ ಸಂಭವಿಸಿದೆ.
‘ಕುಡಿಸುವಂತೆ ಕೇಳಿದ್ದಕ್ಕೆ ಇರಿತ’
ಮದ್ಯ ಕುಡಿಸುವಂತೆ ಕಾರ್ತಿಕ್ ತನ್ನ ಸ್ನೇಹಿತ ಆನಂದ್’ಗೆ ಕೇಳಿಕೊಂಡಿದ್ದ. ಕುಡಿಸದಿದ್ದರೆ ನೂರು ರೂ. ಹಣ ಕೊಡುವಂತೆ ಒತ್ತಾಯಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆನಂದ್ ಜಗಳವಾಡಿ, ಹೊಡೆದಿದ್ದ ಎಂದು ಆರೋಪಿಸಲಾಗಿದೆ.
ನಂತರ ಲಕ್ಷ್ಮೀ ಟಾಕಿಸ್ ಬಳಿ ವೈನ್ ಶಾಪ್ ಒಂದರಲ್ಲಿ ಆನಂದ್ ಮದ್ಯ ಸೇವಿಸುತ್ತಿದ್ದ. ಇದನ್ನು ಗಮನಿಸಿದ ಕಾರ್ತಿಕ್, ತಾನು ಕೇಳಿದಾಗ ಕೊಡಿಸಲಿಲ್ಲವೇಕೆ ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಆನಂದ್ ತರಿಸಿಕೊಂಡಿದ್ದ ಬಾಟಲಿಯನ್ನು ಎತ್ತಿಕೊಂಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಆನಂದ್ ತನ್ನ ಜೇಬಿನಲ್ಲಿದ್ದ ಚಾಕು ತೆಗೆದು ಕಾರ್ತಿಕ್ ಹೊಟ್ಟೆಗೆ, ಎದೆ ಭಾಗಕ್ಕೆ ಚುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು

















