SHIMOGA : ನ್ಯೂ ಮಂಡ್ಲಿ ಸರ್ಕಲ್ನಲ್ಲಿ ವಾಹನದ ಹಾರನ್ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಗಾಯಗೊಂಡಿದ್ದ ಯುವಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.
ನ್ಯೂ ಮಂಡ್ಲಿ ಸರ್ಕಲ್ನಲ್ಲಿ ಮುಂದೆ ನಿಂತಿದ್ದ ಕಾರಿಗೆ ಕ್ಯಾಟರಿಂಗ್ ಸಂಸ್ಥೆಯ ವಾಹನದ ಚಾಲಕ ಗಗನ್ ಹಾರನ್ ಮಾಡಿದ್ದ. ಆಗ ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಲ್ವರು ಯುವಕರು ಚಾಲಕನ ಜೊತೆಗೆ ಜಗಳವಾಡಿದ್ದಾರೆ. ಹಾರನ್ ಯಾಕೆ ಮಾಡುತ್ತೀಯ ಎಂದು ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದು ಚಾಲಕ ಗಗನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಗಗನ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ