ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಯುವಕ, ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022

ಮಹಿಳೆಯೊಬ್ಬರು ಸ್ನಾನ ಮಾಡುವಾಗ ಬಾತ್ ರೂಂ ವೆಂಟಿಲೇಟರ್’ನಿಂದ ಕದ್ದು ನೋಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರು ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಕೊಲೆ ಮಾಡುವುದಾಗಿಯು ಬೆದರಿಕೆ ಒಡ್ಡಿದ್ದಾರೆ.

Shimoga Nanjappa Hospital cancer care center

ಶಿವಮೊಗ್ಗದ ಟಿಪ್ಪು ನಗರದಲ್ಲಿ ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಮಹಿಳೆ ಸ್ನಾನ ಮಾಡುವಾಗ ಸಯ್ಯದ್ ಹುಸೇನ್ ಎಂಬಾತ ಕದ್ದು ನೋಡಿದ್ದಾನೆ. ಇದನ್ನು ಅರಿತ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಸಯ್ಯದ್ ಹುಸೇನ್’ನನ್ನು ಹಿಡಿದು, ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಮಚ್ಚು ಹಿಡಿದು ಬಂದರು

ಸಯ್ಯದ್ ಹುಸೇನ್, ಸಯ್ಯದ್ ಇಮ್ರಾನ್ ಇಬ್ಬರು ಶುಕ್ರವಾರ ರಾತ್ರಿ ಮಹಿಳೆ ಮನೆ ಬಳಿಗೆ ಬಂದು ಜಗಳವಾಡಿದ್ದಾರೆ. ಮಹಿಳೆ ಮಗ ಮನೆಯಿಂದ ಹೊರ ಬಂದು ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ.

ಮಹಿಳೆಯ ಮಗನ ಕಿವಿ, ಎಡಗೈ ಹೆಬ್ಬರಳಿಗೆ ಗಾಯವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ | ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್

Shimoga Live News Age Wise Reach Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment