ವಿದ್ಯಾನಗರದಲ್ಲಿ ಬ್ಯಾಂಕ್‌ ಮ್ಯಾನೇಜರ್‌, ಸಿಬ್ಬಂದಿ ಮೇಲೆ ಹಲ್ಲೆ, ಕಾರಣವೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಲು ತೆರಳಿದ್ದ ಕೆನರಾ ಬ್ಯಾಂಕ್‌ ಮ್ಯಾನೇಜರ್‌ (Manager) ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಹಿಳೆಯೊಬ್ಬರು ವಿದ್ಯಾನಗರದ ಕೆನರಾ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದರು. ಮರುಪಾವತಿ ಮಾಡಿರಲಿಲ್ಲ. ಹಾಗಾಗಿ ಬ್ಯಾಂಕ್‌ನ ವ್ಯವಸ್ಥಾಪಕ ಮತ್ತು ಸಿಬ್ಬಂದಿ ಮಹಿಳೆಯ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಲು ತೆರಳಿದ್ದರು. ಆಗ ಮನೆ ಒಳಗಿಂದ ಬಂದ ಎರಡ್ಮೂರು ಮಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕ್ರಿಕೆಟರ್‌ ಮಯಾಂಕ್‌, ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಅರ್ಜುನ್‌ ತೆಂಡೂಲ್ಕರ್‌ ಪ್ರಾಕ್ಟೀಸ್‌

Manager

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment