ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021
ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಹಲ್ಲೆ ನಡೆಸಿ, ಟಿಕೆಟ್ ಕಲೆಕ್ಷನ್ ಹಣವನ್ನು ಕಿಡಿಗೇಡಿಗಳು ಕಿತ್ತೊಯ್ದಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ಕಡೂರು ಘಟಕದ ಕೆಎಸ್ಆರ್ಟಿಸಿ ಬಸ್ಸಿನ ಕಂಡಕ್ಟರ್ ಶಶಿಧರ್ ಮತ್ತು ಚಾಲಕ ದೂದ್ಯನಾಯ್ಕ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಯುನಿಫಾರಂ ಹರಿದು, ಕೊರಳಲ್ಲಿದ್ದ ಚೈನು, ಜೇಬಿನಲ್ಲಿದ್ದ ಟಿಕೆಟ್ ಕಲೆಕ್ಷನ್ ಹಣ 18 ಸಾವಿರ ರೂ.ಗಳನ್ನು ಕಿತ್ತೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಶ್ಲೀಲ ವಿಡಿಯೋ ಕಳುಹಿಸಿದ್ದ
ಈ ಸಂಬಂಧ ಅರಸೀಕೆರೆಯ ಹರೀಶ ಮತ್ತು ಸಪ್ರತ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಹರೀಶ್, ಕಂಡಕ್ಟರ್ ಶಶಿಧರ್ಗೆ ಅಶ್ಲೀಲ ವಿಡಿಯೋಗಳನ್ನು ವಾಟ್ಸಪ್ ಮೂಲಕ ಕಳುಹಿಸುತ್ತಿದ್ದ. ಆಗಾಗ ಕರೆ ಮಾಡಿ ಅಶ್ಲೀಲವಾಗಿ ಬೈಯುತ್ತಿದ್ದು, ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]