ಶಿವಮೊಗ್ಗ ಲೈವ್.ಕಾಂ | KUMSI NEWS | 18 JUNE 2021
ಕರ್ತವ್ಯ ನಿರತ ಪೊಲೀಸ್ ಕಾನ್‍ಸ್ಟೇಬಲ್‍ಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣೆ ಕಾನ್‍ಸ್ಟೇಬಲ್ ಪ್ರವೀಣ್ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಹೇಗಾಯ್ತು ಘಟನೆ?
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಬಂದೋಬಸ್ತ್ ಡ್ಯೂಟಿಗಾಗಿ ಕಾನ್‍ಸ್ಟೇಬಲ್ ಪ್ರವೀಣ್ ಅವರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯ ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದಾಗ ದಿಢೀರ್‍ಗೆ ಪ್ರವೀಣ್ ಅವರ ಎದುರಿಗೆ ಬಂದ ಮಂಜುನಾಥ್, ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರು ಮತ್ತು ಇತರೆ ಪೊಲೀಸರ ನೆರವಿನಿಂದಾಗಿ ಮಂಜುನಾಥನನ್ನು ಹಿಡಿದು ಠಾಣೆಗೆ ಕರೆದೊಯ್ಯಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]