ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಮನೆ ಬಳಿ ನಿತ್ರಾಣಗೊಂಡು ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆಗೆ ನೆರವು ನೀಡುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ರಾತ್ರಿ ಅಂಗಡಿಗೆ ಹೋಗಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಮಾತ್ರೆಯೊಂದನ್ನು ಸೇವಿಸಿದ್ದರಿಂದ ಮನೆ ಬಳಿಗೆ ಬರುತ್ತಿದ್ದಂತೆ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದಾರೆ.
ನೆರವಿಗೆ ಬಂದವನ ಬಣ್ಣ ಬಯಲು
ಮಹಿಳೆ ಬಿದ್ದಿದ್ದನ್ನು ಗಮನಿಸಿದ ಶಬರೀಶ ಎಂಬಾತ ನೆರವಿಗೆ ಧಾವಿಸಿದ್ದಾನೆ. ಕೆಳಗೆ ಬಿದ್ದ ಬೈಕನ್ನು ಸರಿಯಾಗಿ ನಿಲ್ಲಿಸಿ, ಮೂರನೆ ಮಹಡಿಯಲ್ಲಿದ್ದ ಮನೆಗೆ ಮಹಿಳೆಯನ್ನು ಕರೆದೊಯ್ದು ಬಿಟ್ಟಿದ್ದಾನೆ. ಆದರೆ ಮನೆ ಒಳಗೆ ಕಾಲಿಡುತ್ತಿದ್ದಂತೆ ಶಬರೀಶ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಕೂಡಲೆ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ನೆರೆಹೊರೆಯವರು ನೆರವಿಗೆ ಬಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | About Shivamogga Live
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






