ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 14 ಜುಲೈ 2021
ಜಮೀನು ವಿವಾದ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಹಲ್ಲೆ ನಡೆಸಿದ್ದರಿಂದ ಯುವಕನೊಬ್ಬನ ತಲೆಗೆ ಗಂಭೀರ ಗಾಯವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಜಮೀನು ವಿವಾದ ಸಂಬಂಧ ಪೂರ್ಣೇಶ್ ಮತ್ತು ಪ್ರಭಾಕರ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಪರಸ್ಪರರು ಕೈ ಕೈ ಮಿಲಾಯಿಸಿದ್ದಾರೆ. ದೊಣ್ಣೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಪೂರ್ಣೇಶ್ ಅವರ ತಂದೆ ಪುಟ್ಟಪ್ಪ ಮತ್ತು ತಾಯಿ ಹೇಮಾವತಿ ಕೂಡ ಗಾಯಗೊಂಡಿದ್ದಾರೆ.
ಆಸ್ಪತ್ರೆಗೆ ಕಿಮ್ಮನೆ ಭೇಟಿ
ಗಾಯಾಳುಗಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಗಲಾಟೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200