ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ, ಜ್ಯೋತಿಷಿ (astrologer) ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದ ಹಿನ್ನೆಲೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.
ಇವತ್ತು ಕಮಲಾಕರ್ ಭಟ್‌ನನ್ನು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಇದನ್ನೂ ಓದಿ : ಸಕೆಂಡ್ ಹ್ಯಾಂಡ್ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್? ಆಗಿದ್ದೇನು?
ಶಿವಮೊಗ್ಗ ಕೋರ್ಟ್‌ಗೆ ಹಾಜರಾಗಿದ್ದೇಕೆ?
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಈ ಸಂಬಂಧ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಮಲಾಕರ್ ಭಟ್‌ನನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

LATEST NEWS
- ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

- ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

- ವಿದ್ಯುತ್ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಮಿನಿಸ್ಟರ್ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

- ಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು










