SHIVAMOGGA LIVE NEWS, 27 JANUARY 2025
ಶಿವಮೊಗ್ಗ : ATM ಮೆಷಿನ್ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ನೆಹರು ರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಕಳ್ಳತನಕ್ಕೆ ಪ್ರಯತ್ನವಾಗಿದೆ. ಘಟನೆ ನಡೆದು ಕೆಲವೇ ಹೊತ್ತಿಗೆ ಪೊಲೀಸರು ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಎಟಿಎಂ ಮೆಷಿನ್ ಮುರಿಯಲು ಯತ್ನ
ಕೆಲವೇ ಹೊತ್ತಿನಲ್ಲಿ ಆರೋಪಿ ವಶಕ್ಕೆ
ಎಟಿಎಂನಲ್ಲಿ ಕಳ್ಳತನ ಯತ್ನದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ಯಾಂಕ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ, ಸಿಸಿಟಿವಿ ಪರಿಶೀಲಿಸಿದರು.
ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಕೋಟೆ ಠಾಣೆ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದರು. ಕೆಲವೇ ಹೊತ್ತಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿದೆ. ಆರೋಪಿ ಬಿಹಾರ ಮೂಲದವನು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬವ ವಾಹನ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಮಂಗಳೂರಿನಲ್ಲಿ ಬ್ಯಾಂಕ್ ರಾಬರಿ ಪ್ರಕರಣದಿಂದ ರಾಜ್ಯದಲ್ಲಿ ಆತಂಕ ಮೂಡಿತ್ತು. ಈಗ ಶಿವಮೊಗ್ಗದಲ್ಲಿಯು ಎಟಿಎಂ ಮೆಷಿನ್ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ.
ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, ಎಟಿಎಂ ಮೆಷಿನ್‌ಗಳಿಗೆ ಹಾನಿಯಾಗಿರುವ ಹಿನ್ನೆಲೆ ಎಟಿಎಂ ಕೇಂದ್ರವನ್ನು ಬಂದ್ ಮಾಡಲಾಗಿದೆ.
ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?