ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.
ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.
ಬಿ.ಹೆಚ್.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ.
ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ಅರಳಿಹಳ್ಳಿ ಬಸಲಿಕಟ್ಟೆಯ ಟ್ರಾಕ್ಟರ್ ಚಾಲಕ ಅಸಾದುಲ್ಲಾ ಅಲಿಯಾಸ್ ಹರ್ಷದ್ (32) ಎಂಬಾತನನ್ನು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ತಮ್ಮಯ್ಯದಾಸ ಅವರ ದೂರಿನ ಅನ್ವಯ ಓಲ್ಡ್ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
