ಮೆಗ್ಗಾನ್ ಆಸ್ಪತ್ರೆಯಲ್ಲಿ 108 ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಖಾಸಗಿ ಆಂಬುಲೆನ್ಸ್ ಚಾಲಕರು 108 ಆಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಮೆಗ್ಗಾನ್ ಆಸ್ಪತ್ರೆ ಬಳಿ ಘಟನೆ ಸಂಭವಿಸಿದೆ.

Shimoga Nanjappa Hospital Helath Package

108 ಆಂಬುಲೆನ್ಸ್ ಚಾಲಕ ಶಿವಮೂರ್ತಿ ಎಂಬುವವರ ಮೇಲೆ ಹಲ್ಲೆಯಾಗಿದೆ. ಶಿವಮೂರ್ತಿ ಅವರು ಆನಂದಪುರದಿಂದ ರೋಗಿಯೊಬ್ಬರನ್ನು ಕರೆತಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ದಾಖಲೆ ಪಡೆಯಲು ಆಸ್ಪತ್ರೆ ಒಳಗೆ ಹೋಗಿದ್ದರು.

ಹಿಂತಿರುಗಿ ಬಂದಾಗ ಮೂವರು ಖಾಸಗಿ ಆಂಬುಲೆನ್ಸ್ ಚಾಲಕರು ಶಿವಮೂರ್ತಿ ಅವರನ್ನು ತಡೆದು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾ. ಇನ್ನೊಮ್ಮೆ ಇಲ್ಲಿ ಆಂಬುಲೆನ್ಸ್ ನಿಲ್ಲಿಸದಂತೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.  

ಇದನ್ನೂ ಓದಿ | ಮೆಗ್ಗಾನ್ ಆಸ್ಪತ್ರೆ ಮುಂದೆ ಆಂಬುಲೆನ್ಸ್ ಚಾಲಕರ ಮಧ್ಯೆ ಗಲಾಟೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

Shimoga Live News Reach Country Wiser Graphics

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment