ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ANANDAPURA | 19 ಏಪ್ರಿಲ್ 2022
ಬಾರ್ ಒಂದರಲ್ಲಿ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿ ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇರಳದ ಜಿಸ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಸಾಗರ ತಾಲೂಕು ಆನಂದಪುರದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ.
ರಬ್ಬರ್ ಟಾಪಿಂಗ್ ಕೆಲಸ ಮಾಡುತ್ತಿದ್ದ ಜಿಸ್ ಎಂಬಾತ ಆನಂದಪುರದ ಬಾರ್ ಒಂದಕ್ಕೆ ಹೋಗಿದ್ದಾನೆ. ಜಿಸ್’ಗೆ ಕನ್ನಡ ಭಾಷೆ ಬರುವುದಿಲ್ಲ. ಬಾರ್’ನಲ್ಲಿ ಯಾರೊಂದಿಗೋ ಗಲಾಟೆಯಾಗಿದೆ. ಈ ವೇಳೆ ಜಿಸ್ ತಲೆಯ ಹಿಂಭಾಗಕ್ಕೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ.
ಕೂಡಲೆ ಅವರನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ