ಶಿವಮೊಗ್ಗ: ಜನಶತಾಬ್ದಿ ರೈಲು ಹತ್ತಲು ತೆರಳುತ್ತಿದ್ದ ವಕೀಲರೊಬ್ಬರ (Advocate) ಮೇಲೆ ಮೂವರು ದುಷ್ಕರ್ಮಿಗಳು ದಾಳಿ ಮಾಡಿ ಅವರ ಬ್ಯಾಗ್ ಕಸಿದುಕೊಂಡಿದ್ದಾರೆ. ಅದರಲ್ಲಿ ಮೊಬೈಲ್, ವಕೀಲರ ಕೋಟ್ ಮತ್ತು ನಗದು ಇತ್ತು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ವಕೀಲ ಅಶೋಕ್ ಅವರು ಜೂನ್ 18ರಂದು ಬೆಂಗಳೂರಿನ ಹೈಕೋರ್ಟ್‌ಗೆ ತೆರಳಬೇಕಿತ್ತು. ಹಾಗಾಗಿ ಬೆಳಗ್ಗೆ ಜನಶತಾಬ್ದಿ ರೈಲು ಹತ್ತಲು ತೆರಳುತ್ತಿದ್ದರು. ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ವಕೀಲ ಅಶೋಕ್ ಅವರನ್ನು ಮೂವರು ದುಷ್ಕರ್ಮಿಗಳು ಹಿಂಬದಿಯಿಂದ ಹಿಡಿದುಕೊಂಡಿದ್ದಾರೆ ಎಂದು ಅರೋಪಿಸಲಾಗಿದೆ.

ಈ ವೇಳೆ ಅಶೋಕ್ ಅವರ ಕಣ್ಣಿಗೆ ಹೊಡೆದಿದ್ದಾರೆ. ಅವರ ಬಳಿ ಇದ್ದ ಬ್ಯಾಗ್ ಕಸಿದುಕೊಂಡಿದ್ದಾರೆ. ಅದರಲ್ಲಿ ₹4000 ನಗದು, ಮೊಬೈಲ್ ಫೋನ್, ಕೋಟ್ ಇತ್ತು ದೂರಿನಲ್ಲಿ ತಿಳಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತಡವಾಗಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Attack On Advocate
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






