ಶಿವಮೊಗ್ಗ: ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ (BUS DRIVER) ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್ ನಿಲ್ದಾಣದ ಸಮೀಪ ಬ್ರೈಟ್ ಹೊಟೇಲ್ ಎದುರು ಘಟನೆ ನಡೆದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನವದುರ್ಗ ಬಸ್ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬ್ರೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು. ಆಗ ಬಂದ ಕಾರೊಂದು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಲಾಯಿತು ಎಂದು ಆರೋಪಿಸಲಾಗಿದೆ.
ಕಾರು ತೆಗೆಯುವಂತೆ ಬಸ್ ಚಾಲಕ ಹಾರನ್ ಮಾಡಿದ್ದಾರೆ. ಕಾರಿನಲ್ಲಿದ್ದ ಮೂರ್ನಾಲ್ಕು ಮಂದಿ ಹೊರಗಿಳಿದು ಬಂದು ರವಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರವಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ
BUS DRIVER
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






