ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಗಾಂಜಾ ಸೇವಿಸುತ್ತಿರುವ ಅನುಮಾನದ ಮೇರೆಗೆ ಪರಿಶೀಲನೆಗೆ ತೆರಳಿದ್ದ ಅಬಕಾರಿ ಇಲಾಖೆ (EXCISE) ಸಿಬ್ಬಂದಿ ಮತ್ತು ಹೋಮ್ ಗಾರ್ಡ್ ಮೇಲೆ ಮೂವರು ಯುವಕರು ಮನಸೋಯಿಚ್ಛೆ ಥಳಿಸಿದ್ದಾರೆ.
ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಲಾಡ್ಜ್ ಒಂದರ ಸಮೀಪ ಗಾಂಜಾ ಸೇವಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಅಬಕಾರಿ (EXCISE) ಡಿವೈಎಸ್ಪಿ ಸೂಚನೆ ಮೇರೆಗೆ ಅಬಕಾರಿ ಕಾನ್ಸ್ಟೇಬಲ್ ಪ್ರಭು ಮತ್ತು ಹೋಮ್ ಗಾರ್ಡ್ ಯುಸುಫ್ ಖಾನ್ ಸ್ಥಳಕ್ಕೆ ತೆರಳಿದ್ದರು.
ಎರಡು ಬೈಕ್, ಮೂವರು ಯುವಕರು

ಸ್ಥಳದಲ್ಲಿ ಎರಡು ಬೈಕ್ಗಳ ಮೇಲೆ ಮೂವರು ಯುವಕರು ಕುಳಿತಿದ್ದಿದ್ದು ಗಮನಕ್ಕೆ ಬಂದಿತ್ತು. ಪರಿಶೀಲನೆಗೆ ತೆರಳಿದ್ದ ಕಾನ್ಸ್ಟೇಬಲ್ ಪ್ರಭುಗೆ ಮೂವರು ಯುವಕರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೆ ಮುಂದಾದಾಗ ಕಾನ್ಸ್ಟೇಬಲ್ ಪ್ರಭು ಮತ್ತು ಹೋಮ್ ಗಾರ್ಡ್ ಯುಸುಫ್ ಖಾನ್ ತಪ್ಪಿಸಿಕೊಂಡು ಸಮೀಪದ ಬಾರ್ನಲ್ಲಿ ರಕ್ಷಣೆ ಪಡೆದಿದ್ದರು.

ಅಲ್ಲಿಗೂ ಬಂದ ಯುವಕರು ಕಾನ್ಸ್ಟೇಬಲ್ ಮತ್ತು ಹೋಮ್ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟು ಹೊತ್ತಿಗೆ ಅಬಕಾರಿ ಇಲಾಖೆಯ ಇತರೆ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಇಬ್ಬರು ಯುವಕರು ಸಿಕ್ಕಿಬಿದ್ದಿದ್ದಾರೆ. ಇವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕಾಶ ಮತ್ತು ಕಿಶೋರ ಎಂದು ಗುರುತಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಅಬಕಾರಿ ಕಾನ್ಸ್ಟೇಬಲ್ ಪ್ರಭು ಮತ್ತು ಹೋಮ್ ಗಾರ್ಡ್ ಯುಸುಫ್ ಖಾನ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





