ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020
ಗಾಂಜಾ ಮಾರುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೇಗಾಯ್ತು ಘಟನೆ?
ಶಿವಮೊಗ್ಗ ತಾಲೂಕು ಮಂಡಘಟ್ಟದಲ್ಲಿ ಮಧು ಮತ್ತು ಮನು ಎಂಬುವವರು ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಅವರನ್ನು ಬಂಧಿಸಲು ಕುಂಸಿ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಮಠಪತಿ ನೇತೃತ್ವದಲ್ಲಿ ಪೊಲೀಸರು ತೆರಳಿದ್ದರು. ಈ ವೇಳೆ ದಾಳಿಯಾಗಿದೆ.
ಪಿಎಸ್ಐ ತಲೆಗೆ ಹಲ್ಲೆ
ಬಂಧನಕ್ಕೆ ತೆರಳಿದ್ದಾಗ ಪಿಎಸ್ಐ ನವೀನ್ ಮಠಪತಿ ಅವರ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಇನ್ನು ಪಿಎಸ್ಐ ರಕ್ಷಣೆಗೆ ಧಾವಿಸಿದ್ದ ಕಾನ್ಸ್ಟೇಬಲ್ ಬಸಂತಪ್ಪ ಅವರ ಕೈಗೆ ಹಲ್ಲೆ ಮಾಡಿ, ಆರೋಪಿಗಳು ಪರಾರಿಯಾಗಿದ್ದಾರೆ.
ಆಸ್ಪತ್ರೆಗೆ ದಾಖಲಾದ ಪೊಲೀಸ್
ಹಲ್ಲೆಗೊಳಗಾದ ಪಿಎಸ್ಐ ನವೀನ್ ಮಠಪತಿ ಮತ್ತು ಕಾನ್ಸ್ಟೇಬಲ್ ಬಸಂತಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಆರೋಪಿ ಪತ್ತೆಗೆ ಕಾರ್ಯಾಚರಣೆ
ಪೊಲೀಸರ ಮೇಲೆ ಹಲ್ಲೆ ನಡೆಸಿದ ಮನು ಮತ್ತು ಮಧು ಎಂಬುವವರು ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ತಂಡ ರಚಿಸಿದ್ದಾರೆ. ‘ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಧು ಮತ್ತು ಮನು ಎಂಬುವವರ ಬಂಧನಕ್ಕೆ ತೆರಳಿದ್ದ ಪಿಎಸ್ಐ ನವೀನ್ ಮಠಪತಿ ಮತ್ತು ಕಾನ್ಸ್ಟೇಬಲ್ ಬಸಂತಪ್ಪ ಅವರ ಹಲ್ಲೆ ನಡೆಸಲಾಗಿದೆ. ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.’ ಎಂದರು.
ಪೊಲೀಸರ ನಿರಂತರ ಕಾರ್ಯಾಚರಣೆ
ಗಾಂಜಾ ಮಾರಾಟ ಮಾಡುತ್ತಿರುವವರ ಹೆಡೆಮುರಿ ಕಟ್ಟಲು ಕುಂಸಿ ಠಾಣೆ ವ್ಯಾಪ್ತಿಯಲ್ಲಿ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪಿಎಸ್ಐ ನವೀನ್ ಮಠಪತಿ ಮತ್ತು ಸಿಬ್ಬಂದಿ ಹಲವು ಕಡೆ ದಾಳಿ ನಡೆಸಿದ್ದಾರೆ. ಮಂಡಘಟ್ಟದಲ್ಲಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]