ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌, ಕಂಡಕ್ಟರ್‌ ಮೇಲೆ ದಾಳಿ, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 9 FEBRUARY 2024

SHIMOGA : ಸಮಯದ ವಿಚಾರವಾಗಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಮತ್ತು ನಿರ್ವಾಹಕನಿಗೆ ಖಾಸಗಿ ಬಸ್‌ ಮಾಲೀಕ ಸೇರಿದಂತೆ ಐವರು ಜಗಳವಾಡಿ, ಹಲ್ಲೆ ನಡೆಸಿದ್ದಾರೆ. ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗವೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಸಕ್ರೆಬೈಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಮುರುಳಿ ಮತ್ತು ಚಾಲಕ ರಾಮನಾಯ್ಕ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ನಿಲ್ದಾಣದಿಂದ ಬಸ್‌ ಹೊರ ತಂದು ಗಾಜನೂರು ಬಸ್‌ ಸ್ಟಾಪ್‌ ಬಳಿ ನಿಲ್ಲಿಸಿದ್ದರು. ಈ ವೇಳೆ ಖಾಸಗಿ ಮಾಲೀಕ ಮತ್ತು ಆತನ ಜೊತೆಗಿದ್ದವರು ಟೈಮಿಂಗ್‌ ವಿಚಾರವಾಗಿ ಕಂಡಕ್ಟರ್‌ ಮುರಳಿ ಜೊತೆಗೆ ಜಗಳವಾಡಿದ್ದಾರೆ. ಅಲ್ಲದೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಚಾಲಕ ರಾಮನಾಯ್ಕ ಮೇಲೂ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾಲ್ನಡಿಗೆ ಗಸ್ತು, ಜಿಲ್ಲೆಯಾದ್ಯಂತ 19 ಕೇಸ್‌ ದಾಖಲು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment