ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022
ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಮಾಹಿತಿ ಹಿನ್ನೆಲೆ, ಪರಿಶೀಲನೆಗೆ ತೆರಳಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಬಸವನಗಂಗೂರು ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ನಾಯ್ಕ್ ಅವರು ಪರಿಶೀಲನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ಬಸವನಗಂಗೂರು ಗ್ರಾಮದ ಜಮೀನು ಒಂದರಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿತ್ತು. ಈ ಕುರಿತು ಗ್ರಾಮ ಲೆಕ್ಕಾಧಿಕಾರಿ ಅವರಿಗೆ ಮಾಹಿತಿ ಬಂದಿತ್ತು. ಆದ್ದರಿಂದ ಪರಿಶೀಲನೆ ತೆರಳಿದ್ದರು. ಆಗ ಜಮೀನಿನಲ್ಲಿ ಮೂರು ಲಾರಿಗಳು ನಿಂತಿದ್ದು ಗಮನಕ್ಕೆ ಬಂದಿದೆ.
‘ಮಣ್ಣು ತೆಗೆಯಲು ಅನುಮತಿ ಇದೆಯೇ’ ಎಂದು ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ನಾಯ್ಕ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಣ್ಣು ತೆಗೆಯುತ್ತಿದ್ದವರು ಸಿಟ್ಟಾಗಿದ್ದು, ಯೋಗೇಶ್ ನಾಯ್ಕ್ ಅವರನ್ನು ತಳ್ಳಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮೂವರ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422