ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ASSAULT | 09 ಮೇ 2022
ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕಡೆಯವರು ಯುವಕನೊಬ್ಬನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗದ ಹಳೆ ಮಂಡ್ಲಿಯಲ್ಲಿ ಯುವಕನ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಯುವತಿ ಮತ್ತು ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. (ಖಾಸಗಿತನದ ದೃಷ್ಟಿಯಿಂದ ಯುವಕ, ಯುವತಿ ಹೆಸರನ್ನು ಬಹಿರಂಗಗೊಳಿಸುತ್ತಿಲ್ಲ).
ಯುವಕ ಮತ್ತು ಯುವತಿ ಶಿವಮೊಗ್ಗದ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಸ್ಪರ ಪರಿಚಯವಾಗಿದ್ದು, ಯುವತಿ ಯುವಕನಲ್ಲಿ ಪ್ರೀತಿ ನಿವೇದನೆ ಮಾಡಿಕೊಂಡಿದ್ದಾಳೆ. ಆದರೆ ಯುವಕ ಇದನ್ನು ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕಡೆಯ ಇಬ್ಬರು ಮಂಡ್ಲಿಯಲ್ಲಿರುವ ಯುವಕನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರರಕಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಕಾರಿನ ಮೇಲೆ ದಾಳಿ ಬೆನ್ನಿಗೆ ಸೂಳೆಬೈಲಿನಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422